ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.
TSK
TSK · 2 ಪೂರ್ವಕಾಲವೃತ್ತಾ 14:6
Treasury of Scripture Knowledge references in ಕನ್ನಡ IRV.
ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.
ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.
ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು.
ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.
ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.
ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.
ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.