¶ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
TSK
TSK · 2 ಪೂರ್ವಕಾಲವೃತ್ತಾ 14:8
Treasury of Scripture Knowledge references in ಕನ್ನಡ IRV.
ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು.
ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು.
ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ;
¶ ಆಮೇಲೆ ಅಮಚ್ಯನು ಯೆಹೂದ್ಯರನ್ನು ಒಟ್ಟಾಗಿ ಸೇರಿಸಿ ಸಹಸ್ರಾಧಿಪತಿ, ಶತಾಧಿಪತಿಗಳ ಕೈಕೆಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳಲ್ಲಿ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟವರನ್ನು ಲೆಕ್ಕ ಮಾಡಿಸಿದನು. ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.