ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.
TSK
TSK · 2 ಪೂರ್ವಕಾಲವೃತ್ತಾ 15:16
Treasury of Scripture Knowledge references in ಕನ್ನಡ IRV.
ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
¶ ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.
ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.
ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.
ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.
ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.
ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.
ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.