¶ ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
TSK
TSK · 2 ಪೂರ್ವಕಾಲವೃತ್ತಾ 15:7
Treasury of Scripture Knowledge references in ಕನ್ನಡ IRV.
ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.
¶ ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.
“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.
ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”
‹ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.›
¶ ‹“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ›‹ಫಲದೊರೆಯುವುದಿಲ್ಲ.›
‹ನೀನು ಪ್ರಾರ್ಥನೆಮಾಡುವಾಗ›‹ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.›
‹ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.›
ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.
ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು.
ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
¶ ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.