TSK

TSK · 2 ಪೂರ್ವಕಾಲವೃತ್ತಾ 16:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.

ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.

ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.

ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’” ಎಂದನು.

ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.