TSK

TSK · 2 ಪೂರ್ವಕಾಲವೃತ್ತಾ 16:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸ.

¶ ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.

“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.

ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.

ಆದರೆ ಯೆಹೂದ್ಯರು ಮತ್ತು ಹಿರಿಯರೊಂದಿಗೆ ದೇವರ ಕೃಪಾಕಟಾಕ್ಷ ಇದ್ದುದರಿಂದ ವಿಚಾರಿಸುವುದಕ್ಕೆ ಬಂದವರು ಅವರಿಗೆ ಅಡ್ಡಿಮಾಡದೆ, ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ, ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೊರಟು ಹೋದರು.

ಆತನು ರಾಜನಿಗೆ, ‘ನೀನು ಮೂರ್ಖ’ ಪ್ರಭುಗಳಿಗೆ, ‘ನೀವು ಕೆಟ್ಟವರು’ ಎಂದು ಹೇಳಬಲ್ಲನೇ?

ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.

ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.

ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.

ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,

ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.

‹ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ›‹ಅಗ್ನಿ ನರಕಕ್ಕೆ ಗುರಿಯಾಗುವನು.›

ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ.

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.