TSK

TSK · 2 ಪೂರ್ವಕಾಲವೃತ್ತಾ 17:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವುದಾದರೆ,

ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.

¶ ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.

ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.

ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.

ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.

ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.

¶ ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.