¶ ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.
TSK
TSK · 2 ಪೂರ್ವಕಾಲವೃತ್ತಾ 19:7
Treasury of Scripture Knowledge references in ಕನ್ನಡ IRV.
ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.
ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.
ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.
ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.
“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.
ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
ದೇವರಲ್ಲಿ ಪಕ್ಷಪಾತವಿಲ್ಲ.
¶ ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.
¶ ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
¶ ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.