ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು.
TSK
TSK · 2 ಪೂರ್ವಕಾಲವೃತ್ತಾ 20:19
Treasury of Scripture Knowledge references in ಕನ್ನಡ IRV.
ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.
¶ ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,
ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣ ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷಧ್ವನಿಯಿಂದ ಜಯಘೋಷ ಮಾಡಿದರು.
ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್, ಎಂಬುವರು ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.
ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.
ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.