TSK

TSK · 2 ಪೂರ್ವಕಾಲವೃತ್ತಾ 20:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.

ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.

ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.

ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.

ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.

ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.

“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.