TSK

TSK · 2 ಪೂರ್ವಕಾಲವೃತ್ತಾ 20:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿ ಬಂಗಾರದ ಒಡವೆಗಳನ್ನು, ಬಟ್ಟೆಗಳನ್ನು ಕೇಳಿ ಪಡೆದುಕೊಂಡರು.

ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ತೆಗೆದುಕೊಂಡರು.

ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.

¶ ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು.

ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.

ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.