TSK

TSK · 2 ಪೂರ್ವಕಾಲವೃತ್ತಾ 20:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.

ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು.

“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.

ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.

ಕೂಷ್ಯರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ನುಚ್ಚು ನೂರಾಗಿ ಹೋದರು. ಇಸ್ರಾಯೇಲರಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು.

¶ ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.