ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.
TSK
TSK · 2 ಪೂರ್ವಕಾಲವೃತ್ತಾ 20:4
Treasury of Scripture Knowledge references in ಕನ್ನಡ IRV.
ಎಜ್ರನು 8:21
TSK
¶ ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.
ಕೀರ್ತನೆಗಳು 50:15
TSK
ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
ಕೀರ್ತನೆಗಳು 60:10
TSK
ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?
ಆಮೋಸ 5:4
TSK
ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!