ಯೆಹೋಶುವ 21:43
TSK
¶ ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.
TSK
Treasury of Scripture Knowledge references in ಕನ್ನಡ IRV.
¶ ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.
ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.
ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದ್ದಾನೆ. ಆತನು ವಾಗ್ದಾನ ಮಾಡಿದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲಿನ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಿದ್ದೇನೆ.