ಅವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
TSK
TSK · 2 ಪೂರ್ವಕಾಲವೃತ್ತಾ 21:12
Treasury of Scripture Knowledge references in ಕನ್ನಡ IRV.
ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.
ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.
ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.
ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.
ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.
¶ ಇಗೋ, ನಾನು ನೋಡುತ್ತಿರಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರುಳಿಯು ಕಾಣಿಸಿತು.
¶ “ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’