TSK

TSK · 2 ಪೂರ್ವಕಾಲವೃತ್ತಾ 21:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.

ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.

ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ಮತ್ತು ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು.

ಇದೆಲ್ಲಾ ಆದಮೇಲೆ, ಯೆಹೋವನು ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದನು.

(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.