TSK

TSK · 2 ಪೂರ್ವಕಾಲವೃತ್ತಾ 22:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.

¶ ಇದಲ್ಲದೆ ಅಹಜ್ಯನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.

ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.

ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.

¶ “ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ.