ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ,
TSK
TSK · 2 ಪೂರ್ವಕಾಲವೃತ್ತಾ 22:9
Treasury of Scripture Knowledge references in ಕನ್ನಡ IRV.
¶ ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.
ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.
ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.
ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.
ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.
ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.