ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.
TSK
TSK · 2 ಪೂರ್ವಕಾಲವೃತ್ತಾ 23:15
Treasury of Scripture Knowledge references in ಕನ್ನಡ IRV.
¶ ಅಹಜ್ಯನು ಮರಣ ಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.
ಕೀರ್ತನೆಗಳು 5:6
TSK
ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.
ಯೆರೆಮಿಯ 31:40
TSK
ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.
ಯಾಕೋಬನು 2:13
TSK
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.