TSK

TSK · 2 ಪೂರ್ವಕಾಲವೃತ್ತಾ 23:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.

ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.

ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.

ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.

ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.