TSK

TSK · 2 ಪೂರ್ವಕಾಲವೃತ್ತಾ 25:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.

ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೇ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆ ವಿಧಿಸಿದನು.

ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.

ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.