TSK

TSK · 2 ಪೂರ್ವಕಾಲವೃತ್ತಾ 26:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.

ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.

ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.

¶ ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.