ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
TSK
TSK · 2 ಪೂರ್ವಕಾಲವೃತ್ತಾ 26:8
Treasury of Scripture Knowledge references in ಕನ್ನಡ IRV.
ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”
¶ ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
¶ ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.
ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರಿ ನಡೆಯುವಂತೆ ಮಾಡಿದನು.
¶ ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.
ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.