TSK

TSK · 2 ಪೂರ್ವಕಾಲವೃತ್ತಾ 28:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೋತಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.

¶ ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.

¶ ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು.

ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು.