ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ,
TSK
TSK · 2 ಪೂರ್ವಕಾಲವೃತ್ತಾ 28:15
Treasury of Scripture Knowledge references in ಕನ್ನಡ IRV.
¶ ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು.
ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬುವವರು ಯುದ್ಧದಿಂದ ಬರುವವರ ಮುಂದೆ ನಿಂತು,
ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು,
‹ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;›
ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.
ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.
¶ ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.
ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,