TSK

TSK · 2 ಪೂರ್ವಕಾಲವೃತ್ತಾ 28:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.

¶ ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.

ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು.

ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.

ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.

¶ ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.