TSK

TSK · 2 ಪೂರ್ವಕಾಲವೃತ್ತಾ 28:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’

ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.

ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.

¶ ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

¶ ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.

ನಿನ್ನ ಕೆಟ್ಟತನವು ಬಯಲಿಗೆ ಬರುವುದಕ್ಕೆ ಮೊದಲು, ಆ ನಿನ್ನ ಗರ್ವಕಾಲದಲ್ಲಿ ಅರಾಮ್ಯರ ಪುತ್ರಿಯರಿಂದಲೂ ಮತ್ತು ಫಿಲಿಷ್ಟಿಯರ ಪುತ್ರಿಯರಿಂದಲೂ ನಿನ್ನ ಹೆಸರು ಅವರ ಬಾಯಲ್ಲಿ ಬರಲೇ ಇಲ್ಲ.