¶ ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
TSK
TSK · 2 ಪೂರ್ವಕಾಲವೃತ್ತಾ 28:9
Treasury of Scripture Knowledge references in ಕನ್ನಡ IRV.
ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
¶ ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು.
¶ ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು.
¶ ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ಯೆರೂಸಲೇಮಿಗೆ ಹಿಂದಿರುಗಿದನು.
ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.
ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.
ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”
¶ ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.
ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”