TSK

TSK · 2 ಪೂರ್ವಕಾಲವೃತ್ತಾ 29:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.

ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು.

¶ ಇದಲ್ಲದೆ ಅವನು ಮಹಾಪರಿಶುದ್ಧ ಸ್ಥಳವನ್ನು ಕಟ್ಟಿಸಿದನು. ಅದರ ಉದ್ದವು, ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳವಾಗಿತ್ತು. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದಿಂದ ಹೊದಿಸಿದನು.

ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.

ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.

¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.›

ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.