ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.
TSK
TSK · 2 ಪೂರ್ವಕಾಲವೃತ್ತಾ 29:8
Treasury of Scripture Knowledge references in ಕನ್ನಡ IRV.
ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.
ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.
ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;
ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.
ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.
¶ “ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.