ಅರಣ್ಯಕಾಂಡ 9:11
TSK
ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.
TSK
Treasury of Scripture Knowledge references in ಕನ್ನಡ IRV.
ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.
¶ ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,
ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.
¶ ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ಕೊಯ್ದರು.
ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.