ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.
TSK
TSK · 2 ಪೂರ್ವಕಾಲವೃತ್ತಾ 30:8
Treasury of Scripture Knowledge references in ಕನ್ನಡ IRV.
ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.
ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.
ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.
ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.
ಅವರಿಗೆ, “ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪ ಅಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುವಿರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲರ ಮೇಲಿರುವ ದೈವಕೋಪವು ಉಗ್ರವಾಗಿದೆ” ಎಂದು ಹೇಳಿದರು.
ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
¶ ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.
ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ.
ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.
ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
‹ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.›
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.