TSK

TSK · 2 ಪೂರ್ವಕಾಲವೃತ್ತಾ 31:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ಎಂಬುವವರು. ಗೋತ್ರಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.

ಗೇರ್ಷೋನ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.

ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.

“ನೀನು ಇಸ್ರಾಯೇಲರ ಸಂಗಡ ಮಾತನಾಡಿ, ‘ಅವರ ಪೂರ್ವಿಕರ ಒಂದೊಂದು ಕುಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.

ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.

¶ ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.