TSK

TSK · 2 ಪೂರ್ವಕಾಲವೃತ್ತಾ 31:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.

¶ “ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.

ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,

ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, “ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು” ಹೇಳಿದರು.

ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.

ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.

ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.

ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.

ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.