TSK

TSK · 2 ಪೂರ್ವಕಾಲವೃತ್ತಾ 32:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಿಜ್ಕೀಯನು ನಿಮಗೆ, ‘ಯೆಹೋವನ ಮೇಲೆ ಭರವಸದಿಂದಿರಿ; ಆತನು ನಿಮ್ಮನ್ನು ಹೇಗೂ ರಕ್ಷಿಸುವನು. ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’ ಎಂಬುದಾಗಿ ಹೇಳಿದರೆ ಅವನ ಮಾತಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ”

ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.

ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?

ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.

ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.

ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.