TSK

TSK · 2 ಪೂರ್ವಕಾಲವೃತ್ತಾ 32:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.

ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.

ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.

ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.

ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.

‹ಆದರೆ›‹ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.›