¶ ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,
TSK
TSK · 2 ಪೂರ್ವಕಾಲವೃತ್ತಾ 32:27
Treasury of Scripture Knowledge references in ಕನ್ನಡ IRV.
ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.
ಆದುದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನ ಘನತೆಗಳು ಹೆಚ್ಚಾದವು.