TSK

TSK · 2 ಪೂರ್ವಕಾಲವೃತ್ತಾ 32:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.

¶ ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು.

ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು.

ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.

ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.

ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.