TSK

TSK · 2 ಪೂರ್ವಕಾಲವೃತ್ತಾ 32:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.

ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.

ಲಾಕೀಷಿನವರೇ ಅಶ್ವಗಳನ್ನು ರಥಕ್ಕೆ ಕಟ್ಟಿರಿ. ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ, ಹೌದು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.