TSK

TSK · 2 ಪೂರ್ವಕಾಲವೃತ್ತಾ 33:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.

ಅವನು ಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು.

ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.

ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.

ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು.

ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.