TSK

TSK · 2 ಪೂರ್ವಕಾಲವೃತ್ತಾ 33:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ,

ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ

ಆದರೆ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು” ಎಂದು ಹೇಳಿದನು.

ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.

ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.

ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.

ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,

ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.