ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಆರೋನನೂ ಮತ್ತು ಅವನ ಮಕ್ಕಳೂ ಅನುಸರಿಸಿ ನಡೆದರು.
TSK
TSK · 2 ಪೂರ್ವಕಾಲವೃತ್ತಾ 33:8
Treasury of Scripture Knowledge references in ಕನ್ನಡ IRV.
ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.
ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.
¶ “ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.
ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,
ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?
¶ ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.