ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.
TSK
TSK · 2 ಪೂರ್ವಕಾಲವೃತ್ತಾ 33:9
Treasury of Scripture Knowledge references in ಕನ್ನಡ IRV.
ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.
ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅನುಸರಿಸಿದರು.
ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.
ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.
ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
¶ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಕೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.
ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”