TSK

TSK · 2 ಪೂರ್ವಕಾಲವೃತ್ತಾ 34:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು.

ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.

¶ ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.