TSK

TSK · 2 ಪೂರ್ವಕಾಲವೃತ್ತಾ 34:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನ ವಾಕ್ಯವು ಶೆಮಾಯನಿಗೆ, “ಇವರು ತಮ್ಮನ್ನು ತಗ್ಗಿಸಿಕೊಂಡಿದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇಮಿನ ಮೇಲೆ ಸುರಿದು ಬಿಡುವುದಿಲ್ಲ.

ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.

ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.

ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.

ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.

ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.

ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.

ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.

ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.