ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.
TSK
TSK · 2 ಪೂರ್ವಕಾಲವೃತ್ತಾ 34:3
Treasury of Scripture Knowledge references in ಕನ್ನಡ IRV.
ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.
ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.
¶ ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.
ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.
ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.
ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.
‹ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.›