TSK

TSK · 2 ಪೂರ್ವಕಾಲವೃತ್ತಾ 34:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.

ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.

¶ ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.

ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.

ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.

ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.

ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.

ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.

ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.

ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.