TSK

TSK · 2 ಪೂರ್ವಕಾಲವೃತ್ತಾ 34:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.

¶ ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.

¶ ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.

ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ. ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.