TSK

TSK · 2 ಪೂರ್ವಕಾಲವೃತ್ತಾ 34:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,

ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡು ಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು, ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಲೇಖಕನೂ, ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದನ್ನು ಅದರ ಸ್ಥಳದಲ್ಲಿಡುತ್ತಿದ್ದರು.

ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.

¶ ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.

ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,

ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು.