TSK

TSK · 2 ಪೂರ್ವಕಾಲವೃತ್ತಾ 35:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.

¶ ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,

ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು.

ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.

ಯಾಜಕರೂ ಮತ್ತು ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ ಲೇವಿಯರು ದೇಶಾಂತರದಿಂದ ಹಿಂದಿರುಗಿ ಬಂದವರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು.

ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ; ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.